ಕಲ್ಯಾಣ ಕರ್ನಾಟಕದ ನಾಗರಿಕರಲ್ಲಿ ಕಳಕಳಿಯ ವಿನಂತಿ,
ಕಲ್ಯಾಣ ಕರ್ನಾಟಕ ವಿಭಾಗದ 07 ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಗಳಲ್ಲಿ ಸರ್ವರ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಯೋಜನೆ ರೂಪಿಸುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವನ್ನು ರಚಿಸಿ, ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಧುರಿಣರು ಮಾಜಿ ಸಂಸದರು ಹಾಗೂ ಮಾಜಿ ರಾಜ್ಯಸಭೆ ಸದಸ್ಯರಾದ ಡಾ. ಬಸವರಾಜ ಪಾಟೀಲ್ ಸೇಡಂರವರನ್ನು ಸಂಘದ ಅಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಿರುತ್ತಾರೆ. ಕಲ್ಯಾಣ ಕರ್ನಾಟಕ ಭಾಗದವರಾದ ತಾವು ಪ್ರಪಂಚದ ವಿವಿದೆಡೆ ನೆಲೆಸಿದ್ದಲ್ಲಿಅಥವಾ ಸೇವೆ ಸಲ್ಲಿಸುತ್ತಿದ್ದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ನಿಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಈ ಕೆಳಗೆ ಸಲ್ಲಿಸ ಬೇಕಾಗಿ ವಿನಂತಿ.